Mangalore and Udupi news
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್‌ ಪಿ.ಡಿ.ಓ ಮತ್ತು ಸಹಾಯಕ.!!

Advertisement

ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ದೂರದಾರರು 9/11 ದಾಖಲೆ ಮಾಡಿಕೊಡಲು ಗಂಗೊಳ್ಳಿ ಗ್ರಾಮಪಂಚಾಯತ್ ಗೆ ತೆರಳಿದ್ದರು, ಈ ವೇಳೆ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರು 27 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ಹಣ ನೀಡಲು ಹಿಂದೇಟು ಹಾಕಿದ ದೂರುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿರುತ್ತಾರೆ. ಇಂದು ಬೆಳಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಕಚೇರಿಯಲ್ಲಿ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ರೂ.22,000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಸದರಿ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ಮಾರ್ಗದರ್ಶನದಲ್ಲಿ, ಉಡುಪಿಯ ಲೋಕಾಯುಕ್ತ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ ಹಾಗೂ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್ ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

Related posts

Leave a Comment