Mangalore and Udupi news
ಪ್ರಸ್ತುತರಾಜಕೀಯರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Former Chief Minister and veteran politician S.M. Krishna has been admitted to Manipal Hospital due to age-related health issues. Today (Oct 19), Deputy Chief Minister D.K. Shivakumar visited Manipal Hospital to inquire about S.M. Krishna’s health. The 92-year-old S.M. Krishna is receiving treatment at Manipal Hospital in Bengaluru. He is being treated under the leadership of Dr. Satyanarayana and Dr. Sanil Karanth.

 

Related posts

Leave a Comment