Mangalore and Udupi news
ಅಪರಾಧಮಂಗಳೂರು

ಬಂಟ್ವಾಳ: ಹಿಂದೂ ದೇವರ ಅವಹೇಳನ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ : ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರಿಕರಿಸಿ, ಅವಹೇಳನಕಾರಿ ಪೋಸ್ಟ್ ಮಾಡಿದ ತಪ್ಪಿತಸ್ಥರಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಠಾಣೆಗೆ ದೂರು ನೀಡಲಾಗಿದೆ.

ಹಿಂದೂ ಧರ್ಮದ ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರೀಕರಿಸಿ ಅಸಹ್ಯ ಹಾಡುಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಂಟ್ವಾಳ ನಗರ ಠಾಣೆಗೆ ದೂರು ನೀಡಲಾಗಿದೆ.

ಈ ವೇಳೆ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ಪಿ, ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್, ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಮತ್ತಿತರು ಉಪಸ್ಥಿತರಿದ್ದರು.

Related posts

Leave a Comment