ಮಂಗಳೂರು : ಸೈಬರ್ ಇಕೋನಾಮಿಕ್ ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಒಳಪೇಟೆಯ ಸಲೀಂ ಯಾನೆ ಮುಹಮ್ಮದ್ ಸಲೀಂ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು 2019ರಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜಾಮೀನು ಪಡೆದ ಬಳಿಕ ಕಳೆದ ನಾಲ್ಕು ವರ್ಷದಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಮಂಗಳವಾರ ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮಾದೇವ್ ಮಾಂಗ್ ಮತ್ತು ತಿಪ್ಪಾರೆಡ್ಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
The accused who was absconding has been arrested by the police in connection with the case registered at the Cyber Economic Narcotic Crime Police Station. Salim Yane Muhammad Salim (38) of Ullall was arrested by the police.