Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು – ಯುವಕ ಮೃತ್ಯು.!!

ಮಂಗಳೂರು: ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಮೃತಪಟ್ಟವರು.

ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಶನಿವಾರ ಬೆಳಗ್ಗೆ ಖಾಸಗಿ ಕ್ಲಿನಿಕ್ ಗೆ ತೆರಳಿದ್ದರು. ಮಾಝಿನ್ ರೊಂದಿಗೆ ಅವರ ತಾಯಿ ಮತ್ತು ಪತ್ನಿ ಕೂಡಾ ಇದ್ದು, ಹೊರಗೆ ಕಾಯುತ್ತಿದ್ದರು. ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಈ ಸಣ್ಣ ಶಸ್ತ್ರ ಚಿಕಿತ್ಸೆಯು ಸಂಜೆಯಾದರೂ ಮುಗಿಯಲಿಲ್ಲ ಎನ್ನಲಾಗಿದೆ.

ಇದರಿಂದ ಸಂಶಯಗೊ0ಡ ಮಾಝಿನ್ ರ ತಾಯಿ ಮತ್ತು ಪತ್ನಿ ವಿಚಾರಿಸಿದಾಗ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂಬ ಉತ್ತರ ಲಭಿಸಿದೆ. ತಕ್ಷಣ ಅಲ್ಲಿಂದ ಕೋಡಿಯಾಲ್ ಬೈಲ್ ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವುದಾಗಿ ಘೋಷಿಸಿದರು.

ಮಾಝಿನ್ ಪ್ರಾಣ ಕಳಕೊಳ್ಳಲು ಕ್ಲಿನಿಕ್ ನ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿದ್ದರಿ0ದ ಹೀಗಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆ ಶಮನ್ ಇಬ್ರಾಹಿಂ ನೀಡಿದ ದೂರಿನಂತೆ ಕದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Related posts

Leave a Comment